TSK

TSK · 1 ಪೂರ್ವಕಾಲವೃತ್ತಾ 1:34

مراجع Treasury of Scripture Knowledge في ಕನ್ನಡ IRV.

العودة إلى المقطع

ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು.

¶ ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.

¶ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?

ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು;

ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.