TSK

TSK · 1 ಪೂರ್ವಕಾಲವೃತ್ತಾ 10:4

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು

¶ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.

ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,

ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.

ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ

ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.

(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.