ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.
TSK
TSK · 1 ಪೂರ್ವಕಾಲವೃತ್ತಾ 11:3
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.
¶ ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
¶ ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
¶ ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.