TSK

TSK · 1 ಪೂರ್ವಕಾಲವೃತ್ತಾ 11:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.

ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.

ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.