TSK

TSK · 1 ಪೂರ್ವಕಾಲವೃತ್ತಾ 13:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.

¶ ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.

ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.

ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.

ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.