TSK

TSK · 1 ಪೂರ್ವಕಾಲವೃತ್ತಾ 13:2

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.

“ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.

ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು.

ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.

ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.

ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.