TSK

TSK · 1 ಪೂರ್ವಕಾಲವೃತ್ತಾ 15:2

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.

“ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.

ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.

¶ ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

¶ ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.

¶ ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.

ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.