¶ “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ
TSK
TSK · 1 ಪೂರ್ವಕಾಲವೃತ್ತಾ 16:29
مراجع Treasury of Scripture Knowledge في ಕನ್ನಡ IRV.
ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
¶ “ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,
ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.