TSK

TSK · 1 ಪೂರ್ವಕಾಲವೃತ್ತಾ 17:12

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.

ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು.

ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.

‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ

ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.