TSK

TSK · 1 ಪೂರ್ವಕಾಲವೃತ್ತಾ 17:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.

ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.

ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.

¶ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.