TSK

TSK · 1 ಪೂರ್ವಕಾಲವೃತ್ತಾ 18:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.

ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.

ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.