TSK

TSK · 1 ಪೂರ್ವಕಾಲವೃತ್ತಾ 2:51

مراجع Treasury of Scripture Knowledge في ಕನ್ನಡ IRV.

العودة إلى المقطع

¶ ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.

ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು

ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.

¶ ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,

ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.