TSK

TSK · 1 ಪೂರ್ವಕಾಲವೃತ್ತಾ 20:3

مراجع Treasury of Scripture Knowledge في ಕನ್ನಡ IRV.

العودة إلى المقطع

ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.

ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.

ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.