ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
TSK
TSK · 1 ಪೂರ್ವಕಾಲವೃತ್ತಾ 21:17
مراجع Treasury of Scripture Knowledge في ಕನ್ನಡ IRV.
ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.
ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
¶ ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.
ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.