TSK

TSK · 1 ಪೂರ್ವಕಾಲವೃತ್ತಾ 22:10

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.

ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.

ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು.

ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,

¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.