¶ ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.
TSK
TSK · 1 ಪೂರ್ವಕಾಲವೃತ್ತಾ 23:30
مراجع Treasury of Scripture Knowledge في ಕನ್ನಡ IRV.
¶ ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
¶ ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.
ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.