TSK

TSK · 1 ಪೂರ್ವಕಾಲವೃತ್ತಾ 28:18

مراجع Treasury of Scripture Knowledge في ಕನ್ನಡ IRV.

العودة إلى المقطع

ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.

¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

¶ ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.

ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.

ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

¶ ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.

ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.