¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
TSK
TSK · 1 ಪೂರ್ವಕಾಲವೃತ್ತಾ 28:4
مراجع Treasury of Scripture Knowledge في ಕನ್ನಡ IRV.
¶ ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು.
ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.