ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.
TSK
TSK · 1 ಪೂರ್ವಕಾಲವೃತ್ತಾ 28:5
مراجع Treasury of Scripture Knowledge في ಕನ್ನಡ IRV.
ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.
ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು.
ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.
ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.
¶ ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.
ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.
ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.