TSK

TSK · 1 ಪೂರ್ವಕಾಲವೃತ್ತಾ 28:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.

ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.

¶ ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

¶ ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.

ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.

ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.

ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.

ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.

ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

‹ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.›

ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.

¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.