TSK

TSK · 1 ಪೂರ್ವಕಾಲವೃತ್ತಾ 29:25

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.

ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.

¶ ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.

ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?

ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.

ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.