TSK

TSK · 1 ಪೂರ್ವಕಾಲವೃತ್ತಾ 3:11

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.

ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.

ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು

¶ ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.

¶ ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.

ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.