TSK

TSK · 1 ಪೂರ್ವಕಾಲವೃತ್ತಾ 3:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.

ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

¶ ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.

¶ ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.