TSK

TSK · 1 ಪೂರ್ವಕಾಲವೃತ್ತಾ 3:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

¶ ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.

ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.

¶ ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.

ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.