TSK

TSK · 1 ಪೂರ್ವಕಾಲವೃತ್ತಾ 3:16

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.

ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.

ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?