TSK

TSK · 1 ಪೂರ್ವಕಾಲವೃತ್ತಾ 3:2

مراجع Treasury of Scripture Knowledge في ಕನ್ನಡ IRV.

العودة إلى المقطع

ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.

ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ” ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು.

ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.

ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.

ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.

ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.

ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.

ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.