TSK

TSK · 1 ಪೂರ್ವಕಾಲವೃತ್ತಾ 4:9

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.

ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.

ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.

ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.