¶ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
TSK
TSK · 1 ಪೂರ್ವಕಾಲವೃತ್ತಾ 5:1
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,
¶ ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
¶ ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.
ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.
ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
¶ ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.
¶ ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.