TSK

TSK · 1 ಪೂರ್ವಕಾಲವೃತ್ತಾ 5:2

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

¶ ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.

ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.

¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.

¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.

ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು

ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.

ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.

ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.