ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
TSK
TSK · 1 ಪೂರ್ವಕಾಲವೃತ್ತಾ 5:26
مراجع Treasury of Scripture Knowledge في ಕನ್ನಡ IRV.
ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.
¶ ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
¶ ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.