TSK

TSK · 1 ಪೂರ್ವಕಾಲವೃತ್ತಾ 6:4

مراجع Treasury of Scripture Knowledge في ಕನ್ನಡ IRV.

العودة إلى المقطع

ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.

ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.

ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು

ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.

ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.

ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.

ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.

ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,