ಯೆಹೋಶುವ 15:63
TSK
ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.
TSK
مراجع Treasury of Scripture Knowledge في ಕನ್ನಡ IRV.
ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.
¶ ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
¶ ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.
ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
¶ ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.