TSK

TSK · 1 ಯೋಹಾನನು 2:3

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.

¶ ‹“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?›

‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.

‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.

¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›