TSK

TSK · 1 ಯೋಹಾನನು 3:24

مراجع Treasury of Scripture Knowledge في ಕನ್ನಡ IRV.

العودة إلى المقطع

‹ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.›

‹ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.›

ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.

ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?

ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.

¶ ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.