¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
TSK
TSK · 1 ಯೋಹಾನನು 4:14
مراجع Treasury of Scripture Knowledge في ಕನ್ನಡ IRV.
¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
‹ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.›
‹ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’›
‹ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ›‹ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.›
¶ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
¶ ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.