TSK

TSK · 1 ಅರಸುಗಳು 21:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.

ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.

ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,

¶ ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.

ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.

ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.

ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.