TSK

TSK · 1 ಅರಸುಗಳು 7:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.

ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.

ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,

ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.

ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.

ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.