ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · 1 ಪೇತ್ರನು 1:10
مراجع Treasury of Scripture Knowledge في ಕನ್ನಡ IRV.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‹ನಿಮಗೆ ಸತ್ಯವಾಗಿ ಹೇಳುತ್ತೇನೆ.›‹ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.›
‹ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ”› ಅಂದನು.
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.
ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.