¶ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
TSK
TSK · 1 ಪೇತ್ರನು 1:19
مراجع Treasury of Scripture Knowledge في ಕನ್ನಡ IRV.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
¶ ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.