TSK

TSK · 1 ಪೇತ್ರನು 3:10

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.

ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.

ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.

ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.

¶ ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.

ಆತನು ಅವನಿಗೆ, ‹“ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.›‹ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ”› ಎಂದು ಹೇಳಿದನು.

ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು ‹“ಇಗೋ,›‹ಇವನು ನಿಜವಾದ ಇಸ್ರಾಯೇಲನು,›‹ಇವನಲ್ಲಿ ಕಪಟವಿಲ್ಲ”› ಎಂದು ಹೇಳಿದನು.

ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.

¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.