TSK

TSK · 1 ಪೇತ್ರನು 3:19

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.

ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.