TSK

TSK · 1 ಪೇತ್ರನು 3:9

مراجع Treasury of Scripture Knowledge في ಕನ್ನಡ IRV.

العودة إلى المقطع

‹ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.›

‹ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.›

¶ ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.

¶ ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,

¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.

ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.