TSK

TSK · 1 ಪೇತ್ರನು 5:1

مراجع Treasury of Scripture Knowledge في ಕನ್ನಡ IRV.

العودة إلى المقطع

‹ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.›

‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.

ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.

ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

¶ ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.

¶ ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,

ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ

ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.

ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.

¶ ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;