ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
TSK
TSK · 1 ಪೇತ್ರನು 5:3
مراجع Treasury of Scripture Knowledge في ಕನ್ನಡ IRV.
ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, ‹“ಅನ್ಯಜನರ›‹ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.›
ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.›
ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.
ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.
¶ ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.