TSK

TSK · 1 ಸಮುವೇಲನು 13:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.

ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.

ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.

ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.

ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.