TSK

TSK · 1 ಸಮುವೇಲನು 2:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.

¶ ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.

ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.

ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.

¶ ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು

ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.