TSK

TSK · 1 ಸಮುವೇಲನು 22:2

مراجع Treasury of Scripture Knowledge في ಕನ್ನಡ IRV.

العودة إلى المقطع

ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.

“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.

ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.

ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.

ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.

¶ ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.

ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.

‹ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.›

‹ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.›