TSK

TSK · 1 ಸಮುವೇಲನು 25:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.

ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.

ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

¶ ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.

ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.

¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.