TSK

TSK · 1 ಸಮುವೇಲನು 3:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.

¶ ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ

ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,

ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.

ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.

ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.

ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.