TSK

TSK · 1 ಸಮುವೇಲನು 9:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.

ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.

ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.

¶ ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.